ಸ್ಪರ್ಧೆಗಳ ಉದ್ಘಾಟನಾ ಕಾರ್ಯಕ್ರಮ

ವಿದ್ಯಾರ್ಥಿಗಳ ಪ್ರತಿಭೆಗಳನ್ನು ಹೊರಹೊಮ್ಮಿಸುವಲ್ಲಿ ಸ್ಪರ್ಧೆಗಳು ಬಹುಮುಖ್ಯ ಪಾತ್ರವಹಿಸುತ್ತವೆ. ಶ್ರೀ ರಾಮಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2017-18 ರ ಸಾಲಿನ ವಿವಿಧ ಸ್ಪರ್ಧೆಗಳ ಉದ್ಘಾಟನಾ ಕಾರ್ಯಕ್ರಮವು ಭಾವಗೀತೆ ಸ್ಪರ್ಧೆಯೊಂದಿಗೆ ಪ್ರಾರಂಭವಾಯಿತು. ತೀರ್ಪುಗಾರರಾಗಿ ಆಗಮಿಸಿದ ಕಿನ್ನಿಗೋಳಿಯ ಪ್ರಖ್ಯಾತ ಸಂಗೀತ ಶಿಕ್ಷಕಿ ಶ್ರೀಮತಿ ಕಲಾವತಿ ಹಾಗೂ ಮಂಗಳೂರು ಮತ್ತು ಪುತ್ತೂರಿನ ಬಾಲವಿಕಾಸ ಶಾಲೆ ಮಾಣಿ ಮುಂತಾದೆಡೆ ಸಂಗೀತ ಶಿಕ್ಷಣವನ್ನು ನೀಡುತ್ತಿರುವ ಖ್ಯಾತ ಗಾಯಕಿ ಶ್ರೀಮತಿ ಸಂಧ್ಯಾ ಎಸ್ ಭಟ್ ರವರು ಉದ್ಘಾಟನೆಯನ್ನು ನೆರವೇರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಉಷಾ ಎಸ್ . ಶೆಟ್ಟಿಯವರು ಉಪಸ್ಥಿತರಿದ್ದರು.