ಅಂತರಾಷ್ಟ್ರೀಯ ಯೋಗ ದಿನಾಚರಣೆ

ದಿನಾಂಕ 21-06-2017 ರಂದು ಶ್ರೀ ರಾಮಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ಮಾರ್ಗದರ್ಶಕರಾಗಿ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಯೋಗ ಗುರುಗಳಾದ ಶ್ರೀಯುತ ಸತ್ಯನಾರಾಯಣ ರಾವ್ ರವರು ಆಗಮಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಉಷಾ ಎಸ್ . ಶೆಟ್ಟಿಯವರು ಉಪಸ್ಥಿತರಿದ್ದರು. ಸುಮಾರು 800 ವಿದ್ಯಾರ್ಥಿಗಳು ಹಾಗೂ ಶಾಲಾ ಶಿಕ್ಷಕಿಯರು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.