ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ನಡೆಸಲ್ಪಡುವ ಶ್ರೀ ರಾಮಕೃಷ್ಣ ಪ್ರೌಢ ಶಾಲೆ ಬಂಟ್ಸ್ ಹಾಸ್ಟೆಲ್ ಮಂಗಳೂರು ಇಲ್ಲಿನ ವಿದ್ಯಾರ್ಥಿನಿಯರು ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಮಂಗಳೂರು ದಕ್ಷಿಣ ವಲಯ ಹಾಗೂ ಸ್ವಾಮಿ ಸದಾನಂದ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ನಂತೂರು ಇವರ ಸಹಯೋಗದಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿ , ತಾಲೂಕು ಮಟ್ಟಕ್ಕೆ ಆಯ್ಕೆಯಾದ ಹತ್ತನೆಯ ತರಗತಿಯ ವಿದ್ಯಾರ್ಥಿನಿಯರು (ಎಡದಿಂದ ಬಲಕ್ಕೆ) ಕು.ವಿಜ್ಞಾ ಶೆಟ್ಟಿ – ಗಝಲ್ , ಕು.ಶ್ರದ್ಧಾ ಪ್ರದೀಪ್ -ಭಾಷಣ, ಕು.ಸುದೀಕ್ಷಾ-ಭಾವಗೀತೆ, ಕು.ಸುಶ್ಮಾ-ಹಿಂದಿ ಭಾಷಣ. ಇವರಲ್ಲಿ ಕು.ಸುದೀಕ್ಷಾ ಮತ್ತು ಕು.ಸುಶ್ಮಾ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿ ಕುಮಾರಿ ಸುದೀಕ್ಷ ಭಾವಗೀತೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾಳೆ.