ವನಮಹೋತ್ಸವ ಕಾರ್ಯಕ್ರಮ

ಶ್ರೀ ರಾಮಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ಬಹಳ ಅರ್ಥಪೂರ್ಣವಾಗಿ ನಡೆಯಿತು. ಅತಿಥಿಗಳಾಗಿ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಉಷಾ.ಎಚ್.ಬಲ್ಲಾಳ್ ಮತ್ತು ನಿವೃತ್ತಿ ಶಿಕ್ಷಕಿ ಜ್ಯೋತಿ ಸುವರ್ಣರವರು ಆಗಮಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಉಷಾ ಎಸ್. ಶೆಟ್ಟಿ ಹಾಗೂ ಶಿಕ್ಷಕ ವೃಂದ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಠಿತರಿದ್ದರು. ಶಾಲಾ ವಿದ್ಯಾರ್ಥಿಗಳು ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ನೀಡಿದರು. ಮುಖ್ಯ ಅತಿಥಿಗಳು ಹಾಗೂ ಮುಖ್ಯೋಪಾಧ್ಯಾಯಿನಿಯವರು ಗಿಡ ನೆಡುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆಯನ್ನಿತ್ತರು ಹಾಗೂ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಕಾರ್ಯದಲ್ಲಿ ಭಾಗಿಯಾಗಲು ಕರೆಯನ್ನಿತ್ತರು.